ಬುಧವಾರ, ಫೆಬ್ರವರಿ 28, 2018

ವಿಶ್ವದ ಅತೀ ದೊಡ್ಡ ಸೌರಪಾರ್ಕ್ ನಾಳೆಯಿಂದ ಆರಂಭ*

*##ಮಾಹಿತಿ ವೇದಿಕೆ##*

*ವಿಶ್ವದ ಅತೀ ದೊಡ್ಡ ಸೌರಪಾರ್ಕ್ ನಾಳೆಯಿಂದ ಆರಂಭ*
#############
*ಪಾವಗಡದಲ್ಲಿ 13000 ಎಕರೆಯಲ್ಲಿ ಘಟಕ, ಮೊದಲ ಹಂತದ 600 ಮೆ.ವ್ಯಾ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ*
#######
*ತುಮಕೂರು: ಪಾವಗಡ ತಾಲೂಕಿನಲ್ಲಿ ನಿರ್ಮಾಣ  ಮಾಡಲಾಗಿರುವ ವಿಶ್ವದ ಅತೀ ದೊಡ್ಡ ಸೋಲಾರ್ ಪಾರ್ಕ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಲಿದ್ದಾರೆ.*
###########
*ಮೊದಹ ಹಂತದ ತಿರುಮಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ 600 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.1 ರಂದು ಬೆಳಿಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.*
###########
*ತಿರುಮಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಯಚರ್ಲು, ವಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವೆಂಕಟಮ್ಮನಹಳ್ಳಿ, ಕ್ಯಾತಗಾನಚೆರ್ಲು ಬಳಸಮುದ್ರ ಸೇರಿ ಒಟ್ಟು 5 ಗ್ರಾಮಗಳ 13,000 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸೌರಶಕ್ತಿ ಘಟಕ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. *
#############
*ಸೌರ ಪಾರ್ಕ್ ರೂ.15 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ರೈತರಿಂದ 25 ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ಭೂಮಿಯನ್ನು ಪಡೆಯಲಾಗಿದೆ. ಸತತ 40 ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ಪಾವಗಡದಲ್ಲಿ ಸ್ಥಳೀಯವಾಗಿ ಸಂಪನ್ಮೂಲ ಕ್ರೋಢೀಕರರಿಸಬೇಕೆಂಬ ಉದ್ದೇಶದಿಂದ ಈ ಪಾರ್ಕ್'ನ್ನು ನಿರ್ಮಿಸಲಾಗುತ್ತಿದೆ.*

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ