# ಪಶ್ಚಿಮ ಘಟ್ಟಗಳು ಭಾರತದ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ.
# ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಸಹ ಇದೆ.
# ದಖ್ಖನ್ ಪೀಠಭೂಮಿಯಞ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಪಶ್ಚಿಮ ಘಟ್ಟಗಳು ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.
# ಮಹಾರಾಷ್ಟ್ರ -
ಗುಜರಾತ್ ಗಳ ಗಡಿಪ್ರದೇಶದಲ್ಲಿ ತಾಪ್ತಿ ನದಿಯ ದಕ್ಷಿಣದಲ್ಲಿ ಆರಂಭವಾಗುವ ಈ ಶ್ರೇಣಿಯು ದಕ್ಷಿಣಾಭಿಮುಖವಾಗಿ ಹಬ್ಬಿ
ಕನ್ಯಾಕುಮಾರಿಯವರೆಗೆ ಇರುವುದು.
# ಒಟ್ಟು ಸುಮಾರು ೧೬೦೦ ಕಿ.ಮೀ. ಉದ್ದವಿರುವ ಪಶ್ಚಿಮ ಘಟ್ಟಗಳು ಮಹಾರಾಷ್ಟ್ರ, ಗೋವಾ , ಕರ್ನಾಟಕ ,
ಕೇರಳ ಮತ್ತು ತಮಿಳುನಾಡಿನಲ್ಲಿ ಹಬ್ಬಿವೆ.
# ಒಟ್ಟು ಶ್ರೇಣಿಯ ಅರ್ಧಕ್ಕಿಂತ ಹೆಚ್ಚು ಭಾಗವು ಕರ್ಣಾಟಕದಲ್ಲಿಯೇ ಇದೆ.
# ಪಶ್ಚಿಮ ಘಟ್ಟಗಳು ಒಟ್ಟು ೬೦೦೦೦ ಚದರ ಕಿ.ಮೀ. ಪ್ರದೇಶವನ್ನು ಆವರಿಸಿದ್ದು ಅತಿ ಸಂಕೀರ್ಣ ನದಿ ವ್ಯವಸ್ಥೆಗೆ ಮೂಲವಾಗಿವೆ. ಇಲ್ಲಿಂದ ಹೊರಡುವ ನದಿಗಳು ಭಾರತದ ಒಟ್ಟು ಜಲಾನಯನ ಪ್ರದೇಶದ ೪೦% ಭಾಗವನ್ನು ಆವರಿಸಿವೆ.
# ಪಶ್ಚಿಮ ಘಟ್ಟಗಳ ಸರಾಸರಿ ಎತ್ತರ ಸುಮಾರು ೧೨೦೦ ಮೀಟರ್.
# ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ ಜೀವವೈವಿಧ್ಯದ ನೆಲೆಗಳಲ್ಲಿ ಒಂದಾಗಿದ್ದು ೫೦೦೦ಕ್ಕೂ ಹೆಚ್ಚಿನ ತಳಿಯ ಗಿಡಮರಗಳು, ೧೩೯ ಬಗೆಯ
ಸಸ್ತನಿಗಳು , ೫೦೮ ಪ್ರಭೇದದ ಪಕ್ಷಿಗಳು ಮತ್ತು ೧೭೯ ಪ್ರಕಾರದ ದ್ವಿಚರಿಗಳಿಗೆ ನೆಲೆಯಾಗಿವೆ.
# ವಿಶ್ವದಲ್ಲಿ ಅಳಿವಿನಂಚಿನಲ್ಲಿರುವ ಜೀವತಳಿಗಳ ಪೈಕಿ ೩೨೫ ತಳಿಗಳ ಜೀವಿಗಳು ಪಶ್ಚಿಮ ಘಟ್ಟಗಳಲ್ಲಿ ನೆಲೆಸಿವೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ